ಬೆಳಗಾವಿ: ಚಿಕ್ಕೋಡಿಯಲ್ಲಿ ನಿರ್ಮಾಣವಾಗಿರುವ ತಾಯಿ ಮಕ್ಕಳ ಆಸ್ಪತ್ರೆಯನ್ನು ಮುಂಬರುವ ಅಗಸ್ಟ 15 ರಂದು ಲೊಕಾರ್ಪಣೆಗೊಳಿಸ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಂದಿಲ್ಲಿ ಸೂಚಿಸಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಜರುಗಿದ 2024-25ನೇ ಸಾಲಿನ ಪ್ರಥಮ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಚಿಕ್ಕೋಡಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ ಪೂರ್ಣಗೊಂಡು, ಸಿಬ್ಬಂದಿ ನೇಮಕ ಆಗಿದೆ. ಆದ್ದರಿಂದ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒದಗಿಸಲಾಗಿರುವ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಕೂಡಲೇ ಸಾರ್ವಜನಿಕ ಬಳಕೆಗೆ ಒದಗಿಸಬೇಕು.

ರಾಜ್ಯಾದ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದ್ದು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯ ಎಲ್ಲ ಆಸ್ಪತ್ರಗಳಿಗೆ ಡೆಂಗ್ಯೂ ಪರೀಕ್ಷಾ ಕಿಟ್ ಗಳನ್ನು ವಿತರಿಸಬೇಕು. ಅಲ್ಲದೇ ಡೆಂಗ್ಯೂ ಜ್ವರದಿಂದ ಬಳಲುವ ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆ ಒದಗಿಸುವದರ ಜೊತೆಗೆ ಡೆಂಗ್ಯೂ ಜ್ವರಕ್ಕೆ ಬೇಕಾಗುವಂತಹ ಅಗತ್ಯದ ಔಷಧಿಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು.

 ಆಸಿಫ್(ರಾಜು) ಸೇಠ್, ಬಿಮ್ಸ್ ನಲ್ಲಿ ವೈದ್ಯರು, ಶುಶ್ರೂಷಕಿಯರು ಹಾಗೂ ತಾಂತ್ರಿಕ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಅವರು, ಮಾತನಾಡಿ, ಬಿಮ್ಸ್ ಹಾಸಿಗೆ ಪ್ರಮಾಣವನ್ನು ಹೆಚ್ಚಿಸುವುದರ ಜತೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಬೇಕು ಎಂದು ಹೇಳಿದರು.  ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಚಿಕ್ಕೋಡಿಗೆ ಮತ್ತೊಂದು ಜಿಲ್ಲಾ ಆಸ್ಪತ್ರೆ ಸ್ಥಾಪಿಸಬೇಕು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಾಸಿಗೆ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಯಾದವ ಒತ್ತಾಯಿಸಿದರು.

 ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾತನಾಡಿ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾತಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವದರ ಮೂಲಕ ಸ್ವಚ್ಚತೆಗೆ ಕ್ರಮವಹಿಸುವಂತೆ ಸೂಚಿಸಲಾಗಿದೆ. ಕಳೆದಮೂರು ದಿನಗಳಲ್ಕಿ 350 ಪರೀಕ್ಷೆಗಳು ಜರುಗಿದ್ದು ಇದರಲ್ಲಿ 3 ಪ್ರಕರಣಗಳು ಧೃಡಪಟ್ಟಿರುತ್ತವೆ ಎಂದು ತಿಳಿಸಿದರು.