ಬೆಳಗಾವಿ : ಕಾರಿನಲ್ಲಿ ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 1.10 ಕೋ.ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮದುರ್ಗ ತಾಲ್ಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿ ಕಾರು ನಿಲ್ಲಿಸಿ ಪೊಲೀಸರು ತಪಾಸಣೆ ಮಾಡಿ ಮಾಡಿದಾಗ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಪತ್ತೆಯಾಗಿದೆ. ಪೊಲೀಸರು ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠಲ್ ಢವಳೇಶ್ವರ ತನ್ನ ಕಾರಿನಲ್ಲಿ ಹಣ ಸಾಗಿಸುತ್ತಿದ್ದ. ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.