ನವದೆಹಲಿ: ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕಾಗಿ ಅಗತ್ಯವಿರುವ ಜಮೀನನ್ನು ಕರ್ನಾಟಕ ಸರ್ಕಾರ ರೈಲ್ವೆ ಇಲಾಖೆಗೆ ಇದುವರೆಗೂ ಹಸ್ತಾಂತರಿಸಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.
‘ಬೆಳಗಾವಿಯಿಂದ ಕಿತ್ತೂರ ಮಾರ್ಗವಾಗಿ ಧಾರವಾಡವರೆಗೆ 73 ৪.১. ಉದ್ದದ ರೈಲು ಮಾರ್ಗವನ್ನು 50:50 ಪಾಲುದಾರಿಕೆ ಯಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ಹಾಗೂ ರೈಲ್ವೆ ಯೋಜನಾ ವೆಚ್ಚದಲ್ಲಿ ತಲಾ ಶೇ 50 ಭರಿಸಬೇಕು. ಇದಕ್ಕೆ ಅಗತ್ಯವಿರುವ ಜಮೀನಿನನ್ನು ಕರ್ನಾಟಕ ಸರ್ಕಾರವು ಉಚಿತವಾಗಿ ನೀಡಬೇಕಿದೆ’ ಎಂದು ಅವರು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶ್ನಿಸಿದ್ದರು.

ಯೋಜನೆಗೆ ಅಗತ್ಯವಿರುವ ಭೂಮಿಯ ಸ್ವಾಧೀನಪಡಿಸಿಕೊಳ್ಳುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಕೆಐಎಡಿಬಿಗೆ ವಹಿಸಿದೆ. 888 ಎಕರೆ ಒದಗಿಸುವಂತೆ ಕೆಐಎಡಿಬಿಗೆ ಬೇಡಿಕೆಯನ್ನೂ ಸಲ್ಲಿಸಲಾಗಿದೆ’ ಎಂದು ಸಚಿವ ವೈಷ್ಣವ್ ವಿವರಿಸಿದ್ದಾರೆ.