ಬೆಳಗಾವಿ : ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ದಿ.13 ರಂದು ಬೆಳಗ್ಗೆ 8 ಗಂಟೆಯಿಂದ ನಗರದ ಆರ್ ಪಿಡಿ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆಗೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.
ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರಗಳ ಫಲಿತಾಂಶ ತಿಳಿಯುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಹೇಳಿದರು.
ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪಿಸಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಎಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಪ್ರಥಮವಾಗಿ ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಮತಗಳ ಎಣಿಕೆ ನಡೆಯಲಿದೆ. ನಂತರ 8.30 ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗಲಿದೆ. ಒಂದು ಟೇಬಲ್ ನಲ್ಲಿ 500 ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಬೆಳಗಾವಿ ಪೊಲೀಸ್ ಕಮಿಷನರ ಡಾ. ಬೋರಲಿಂಗಯ್ಯ ಎಂ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂದೀಪ ಪಾಟೀಲ ಅವರು ಭೇಟಿ ನೀಡಿ ಪರಿಶೀಲಿಸಿದರು. ಮತ ಎಣಿಕೆಗೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.