ಬೆಳಗಾವಿ: ಬೆಳಗಾವಿ ನಗರದಲ್ಲಿ ಸರಗಳ್ಳತನ ಪ್ರಕರಣ ತಣ್ಣಗಾಯಿತು ಎನ್ನುವಷ್ಟರಲ್ಲಿ ಮತ್ತೇ ಮಕ್ಕಳ ಅಪಹರಣ ಮಾಡುವ ಗ್ಯಾಂಗ್ ಸಕ್ರಿಯವಾಗಿದ್ದು ನಗರದ ಜನರ ಆತಂಕಕ್ಕೆ ಕಾರಣವಾಗಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕನಿಗೆ ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಅಪಹರಣ ಮಾಡಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಅಪಹರಣಕ್ಕೆ ಯತ್ನಿಸಿದ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.