ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(BDCC)ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಇನ್ನೂ ಒಂದು ವರ್ಷ ಅಧಿಕಾರಾವಧಿ ಇರುವಾಗಲೇ ಶುಕ್ರವಾರ(ಅ4) ಬೆಳಗ್ಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಬಿಡಿಸಿಸಿಯ 14 ಸದಸ್ಯರು ಗುರುವಾರವಷ್ಟೇ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ ನಡೆಸಿ, ಅಧ್ಯಕ್ಷ ರಮೇಶ ಕತ್ತಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.
ಬಿಡಿಸಿಸಿ ಕಾರ್ಯನಿರ್ವಾಹಕ ಅಧಿಕಾರಿಗೆ ರಾಜೀನಾಮೆ ಪತ್ರವನ್ನು ತಮ್ಮ ಆಪ್ತರ ಮೂಲಕ ಬ್ಯಾಂಕಿಗೆ ಕಳುಹಿಸಿರುವ ರಮೇಶ ಕತ್ತಿ, ನನ್ನ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಸಹಕಾರ ನೀಡಿದ ಎಲ್ಲ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ
