ಬೆಳಗಾವಿ: ನಿಪ್ಪಾಣಿ ಬಳಿಯ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿಯ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಎಸ್ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದರು. ಅದರಂತೆ ಬೆಳಗಾವಿ ಜಿಲ್ಲೆಯಲ್ಲೂ ದಾಳಿ ನಡೆಸಿದ್ದು ಅಗತ್ಯ ಕಾಗದ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. ಟ್ರಕ್ ಮುಂತಾದ ವಾಹನಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ ಎಂಬ ಆರೋಪಗಳು ಇವೆ. ಈ ಹಿನ್ನಲೆಯಲ್ಲಿ ಕಾಗದ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಆರಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳ
