ಬೆಳಗಾವಿ,: ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಬೆಳಗಾವಿ – ರಾಮನಗರ – ಅನಮೋಡ ಗೋವಾ ಹಾಗೂ ಬೆಳಗಾವಿ- ಜಾಂಬೋಟಿ – ಕಣಕೊಂಬಿ ಚೋರ್ಲಾ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪ್ರಾಂಭಿಸುವಂತೆ ಸಂಸದ ಜಗದೀಶ ಶೆಟ್ಟರ ಅವರು ಸೂಚಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರಸ್ತಾಪಿತ ಎರಡು ರಸ್ತೆಗಳು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯವಾದ ರಸ್ತೆಗಳು ವ್ಯಾಪಾರ, ವಹಿವಾಟು ಮತ್ತು ಸರಕು ಸಾಗಾಣಿಕೆಗೆ ತುಂಬಾ ಉಪಯುಕ್ತಕರ. ಆದರೆ ಇವೆರಡೂ ರಸ್ತೆಗಳು ತೀವ್ರ ಹಾಳಾದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ದೂರು ನೀಡುತ್ತಿದ್ದು, ಅವುಗಳ ಕಾರ್ಯಾರಂಭ ಮಾಡಬೇಕು ಎಂದು ಸೂಚಿಸಿದರು.
ಬೆಳಗಾವಿ -(ಶಗಣಮಟ್ಟಿ )- ಹುನಗುಂದ- ರಾಯಚೂರು ರಸ್ತೆ ಕಾಮಗಾರಿಯ ಪ್ರಗತಿಯ ವಿವರಗಳನ್ನು ಪಡೆದರು.
ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳಾದ ಭುವನೇಶ್ವರ ಕುಮಾರ, ಪವನ್ ಹಾಗೂ ಭೂಸ್ವಾಧೀನ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ಜೈನಾಪೂರ, ಚೌವ್ಹಾಣ್ ಉಪಸ್ಥಿತರಿದ್ದರು.
ಬೆಳಗಾವಿ- ಗೋವಾ ರಸ್ತೆ ಕಾಮಗಾರಿ ಶೀಘ್ರ ಪ್ರಾರಂಭಿಸಿ
