ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಬಳ್ಳಾರಿ ಮೂಲದ ಗಿರೀಶ್ ಸೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದನ್ನು ಗಮನಿಸಿದ ಇತರ ಸಹಕೈದಿಗಳು ತಕ್ಷಣ ಜೈಲಿನ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಅಂಬುಲೆನ್ಸ್ ಮೂಲಕ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.