ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರದಿಂದ 4 ದಿನಗಳಲ್ಲಿ 46 ಅಧಿಕಾರಿಗಳ ಆಂತರಿಕ ವರ್ಗಾವಣೆ ಆಗಿದೆ ಎನ್ನಲಾಗಿದೆ.
ಸದ್ಯ ರಾಜ್ಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಆಂತರಿಕ ವರ್ಗಾವಣೆ ವಿಚಾರ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗ್ತಿದ್ದು ವರ್ಗಾವಣೆಯಿಂದ ನೊಂದ ಸಿಬ್ಬಂದಿ ಸಚಿವ ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿ ಪಾಲಿಕೆ ಆಯುಕ್ತರಾದ ಶುಭ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆಯುಕ್ತರು ವರ್ಗಾವಣೆ ಮೂಲಕ ನಮಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತೆ ಶುಭರನ್ನು ವರ್ಗಾವಣೆ ಮಾಡುವಂತೆ ಬೆಳಗಾವಿ ಮಹಾನಗರ ಪಾಲಿಕೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಕೆಎಂಎಸ್ ಅಧಿಕಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆ ನೀಡಲಾಗಿದೆ. 6 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿಗೆ ಇದೆ ಮೊದಲ ಬಾರಿಗೆ ಕೆಎಂಎಸ್ ಅಧಿಕಾರಿ ಆಯುಕ್ತ ಆಗಿ ಬಂದಿದ್ದಾರೆ. ಐಎಎಸ್ ಅಧಿಕಾರಿಯನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ನಿಯೋಜಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.
ಆಡಳಿತಾತ್ಮಕ ದೃಷ್ಟಿಯಿಂದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.‌ 46 ಜನರನ್ನು ಆಂತರಿಕ ವರ್ಗಾವಣೆ ಮಾಡಿಲ್ಲ. 20 ಜನರನ್ನು ಮಾತ್ರ ವರ್ಗಾಯಿಸಲಾಗಿದೆ.‌ ವರ್ಗಾವಣೆ ಕೂರಿತು ಯಾವುದೆ ಸಿಬ್ಬಂದಿ ತಕಾರು ತೆಗೆದಿಲ್ಲ ಎಂದು ಪಾಲಿಕೆ ಆಯುಕ್ತೆ ಶುಭ ಅವರು ಸ್ಪಷ್ಟವಾಗಿ ಹೇಳಿದ್ದಾರೆ.