ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಐಪಿಎಲ್ ಯ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.
ಬೊರಸೆ ಭೂಷಣ್ ಗುಲಾಬ್ರಾವ್ ಅವರು ಈ ಹಿಂದೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆಯಲ್ಲಿ ಇದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿಯಾಗಿರುವ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗುಪ್ತಚರ ವಿಭಾಗದ ಎಸ್ ಪಿ ಆಗಿರುವ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ(ಸಿ.ವಂಶಿ ಕೃಷ್ಣ ಅವರ ಜಾಗಕ್ಕೆ) ವರ್ಗಾವಣೆ ಮಾಡಲಾಗಿದೆ.
ಕೆಲವು ವರ್ಷಗಳ ಹಿಂದೆ ಬೆಳಗಾವಿ ಉಪ ಪೋಲಿಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.