ಬೆಳಗಾವಿ : ಚನ್ನಮ್ಮನ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ರಸ್ತೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇವರೆಲ್ಲರೂ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿತ್ತೂರು ಠಾಣೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಮೃತಪಟ್ಟವರ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಹೆದ್ದಾರಿ ಕಾರ್ಮಿಕರಿಗೆ ಟ್ಯಾಂಕರ ಡಿಕ್ಕಿ: ಮೂವರ ಸಾವು
