ಅಹಮದಾಬಾದ್: 242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ. ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, ಗುಜರಾತನ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ 242 ಪ್ರಯಾಣಿಕರು ವಿಮಾನದಲ್ಲಿದ್ದರು.
ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ದುರಂತದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಗರೀಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ.