ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ ವೇಳೆ ವ್ಯಕ್ತಿಗೆ ಹಾವು ಕಚ್ಚಿದೆ. ಕೂಡಲೇ ಅದೇ ಹಾವಿನೊಂದಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾದ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.
ಹಾವು ಕಚ್ಚಿಸಿಕೊಂಡ ಯಲ್ಲಪ್ಪ ಗುರವ್ ಎಂಬ ವ್ಯಕ್ತಿ ಮಂಗಳವಾರ ಮಧ್ಯನ ಸುಮಾರಿಗೆ ತನ್ನ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಕೂಡಲೇ
ನಂತರ ಜಿಲ್ಲಾ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗಿದ್ದಾನೆ. ವೈದ್ಯರಿಗೆ ಹಾವನ್ನ ತೋರಿಸಿ, ಇದೆ ಹಾವು ಕಚ್ಚಿದೆ ಚಿಕಿತ್ಸೆ ಕೊಡಿ ಎಂದು ದಾಖಲಾಗಿದ್ದಾನೆ. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆ ಸ್ಥಿತಿ ಗಂಭೀರವಾಗಿದ್ದು ಬಿಮ್ಸ್ ಆಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ
ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ರೈತ
