ಬೆಳಗಾವಿ: ನೀರಾವರಿ ನಿಗಮ ಧಾರವಾಡ ವಿಭಾಗದ ಮುಖ್ಯ ಎಂಜಿನಿಯರ್ ಅಶೋಕ್ ವಾಸನದ ಅವರ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅವರ ಮನೆಯ ಮೇಲೆ ನಡೆದ ದಾಳಿ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಒಡವೆಗಳು ,ಬೆಳ್ಳಿ ಪಾತ್ರೆ, ಬೆಳ್ಳಿ ಕೊಡ, ಬೆಳ್ಳಿಯ ದೀಪಸ್ತಂಭ, ಆರತಿ ತಟ್ಟೆ ಸೇರಿ ಎರಡು ಕೆಜಿ ಬೆಳ್ಳಿ ಆಭರಣ, ₹1.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಧಾರವಾಡದಲ್ಲಿರುವ ಕಚೇರಿ ಮೇಲೆ ದಾಳಿ ನಡೆದಿದೆ.
ಧಾರವಾಡ ಲೋಕಾಯುಕ್ತ ತನಿಖಾಧಿಕಾರಿಗಳು ಈ ದಾಳಿ ನಡೆಸಿದ್ದು, ಆಸ್ತಿ ವಿವರ, ದಾಖಲೆಗಳು ಹಾಗೂ ಇನ್ನಿತರ ಪ್ರಮುಖ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಲೋಕಾಯುಕ್ತ ದಾಳಿ: ಅಪಾರ ಪ್ರಮಾಣದ ಚಿನ್ನಾಭರಣ ನಗದು ಪತ್ತೆ
