ಬೆಳಗಾವಿ:,ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಬುಧವಾರ ದಿ. 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಬೆಳಗಾವಿ ಸೇರಿಂದರೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಖಾನಾಪುರ, ಕಿತ್ತೂರು, ಗೋಕಾಕ ನಲ್ಲಿ ಭಾರೀ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಮಲಪ್ರಭಾ ನದಿಯ ನೀರಿನ ಒಳಹರಿವು ಹೆಚ್ಚಳಗೊಂಡಿದೆ.
ನಿರಂತರ ಮಳೆಯಿಂದಾಗಿ ಬೆಳಗಾವಿ ನಗರದಲ್ಲಿ ರಸ್ತೆ ಉದ್ದಕ್ಕೂ ನೀರು ಹರಿಯುತ್ತಿದು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಪರಡುವಂತಾಗಿದೆ. ಮಲಪ್ರಭಾ, ಘಟಪ್ರಭಾ ನಸಿಗಳಯ ಒಳ ಹರಿವು ಏರಿಕೆಯಾಗಿದ್ದು, ರೈತರು ಹರ್ಷಗೊಂಡಿದ್ದಾರೆ.