ಬೆಳಗಾವಿ,: ಹೊಲದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಕರಡಿ ದಾಳಿ ಮಾಡಿದ ಪರಿಣಾಮ ರೈತನೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ ಗ್ರಾಮದ ರೈತ
ದಶರಥ ವಾರಂಡೇಕರ್(55) ಕರಡಿ ದಾಳಿಗೆ ಒಳಗಾದ ರೈತನಾಗಿದ್ದಾರೆ.
ಬೆಳಗಿನ ಜಾವ ಹೊಲದಲ್ಲಿ ಕೆಲಸ ಮಾಡುವ ವೇಳೆ ಕರಡಿ ದಾಳಿ ಮಾಡಿದ್ದು,
ಮುಖಕ್ಕೆ ಕಚ್ಚಿದ್ದರಿಂದ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ರೈತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರಡಿ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು
ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದು, ರೈತನನ್ನು ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕರಡಿ ದಾಳಿ : ರೈತನಿಗೆ ಗಂಭೀರ ಗಾಯ
