ಬೆಳಗಾವಿ:,ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ, ಖಾನಾಪುರ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಗುರುವಾರ ದಿ. 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿಯಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಬೆಳಗಾವಿ ಸೇರಿಂದರೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಇಂದೂ ಕೂಡ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ಕಿತೂರು ತಾಲೂಕಿನಲ್ಲಿಯೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಘಟ್ಟಪ್ರದೇಶವಾದ ಖಾನಾಪೂರ ತಾಲೂಕಿನಲ್ಲಿ ಮಳೆ ತೀವ್ರಗೊಂಡಿದ್ದ ಹಲವು ಹಳ್ಳಿಗಳಿಗೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಳೆ :ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
