ಬೆಳಗಾವಿ : ಬೆಳಗಾವಿ ಮೇಯರ್ ಮಂಗೇಶ್ ಪವಾರ್ ಮತ್ತು ಕಾರ್ಪೊರೇಟರ್ ಜಯಂತ್ ಜಾಧವ್ ಅವರನ್ನು ಯುಡಿ ಕಾರ್ಯದರ್ಶಿ ಶುಕ್ರವಾರ ಅವರು ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಗೋವಾವೇಸ್
ತಿನಿಸುಕಟ್ಟೆಯಲ್ಲಿ ಇವರಿಬ್ಬರು ಕಾನೂನು ಬಾಹಿರವಾಗಿ ಮಳಿಗೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇವರಿಬ್ಬರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ಬೆಳಗಾವಿಯ ಗೋವಾವೇಸ್ ತಿನಿಸು ಕಟ್ಟೆ ಮಳಿಗೆ ಪಡೆದ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಈ ಇಬ್ಬರೂ ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆ, ಪಾಲಿಕೆ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಈ ಹಿಂದೆ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತರು ಈ ಇಬ್ಬರು ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿದ್ದರು.
ಆದರೆ ಅವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದದ್ದರು. ಈ ನಡುವೆ ಮಂಗೇಶ ಪವಾರ್ ಬೆಳಗಾವಿ ಮೇಯರ್ ಆಗಿ ಆಯ್ಕೆಯಾದರು.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ನರ್ದೇಶನ ನೀಡಿತ್ತು. ಅದರಂತೆ ನಗರಾಭಿವದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ವಿಚಾರಣೆ ನಡೆಸಿ ಈ ಇಬ್ಬರ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಾರ್ಡ್ ನಂಬರ್ 23 ಮತ್ತು 41 ಸ್ಥಾನಗಳು ತೆರವಾಗಿವೆ ಎಂದು ಘೋಷಿಸಿದ್ದಾರೆ.