ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರಾಜಾಲಖಮಗೌಡ ಜಲಾಶಯದಿಂದ 6 ಕ್ರಸ್ಟರ್ ಗೇಟ್ ಗಳ ಮೂಲಕ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.
51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಸದ್ಯ 43 ಟಿಎಂಸಿ ನೀರು ಸಂಗ್ರಹ ಆಗಿರುವ ಹಿನ್ನೆಲೆಯಲ್ಲಿ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇನ್ನು ಜಲಾಶಯಕ್ಕೆ 17,692 ಕ್ಯೂಸೆಕ್ ನೀರಿನ ಒಳಹರಿವು ಇದೆ. ನೀರು ಬಿಡುತ್ತಿದ್ದಂತೆ ನೆರೆದಿದ್ದ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಒಳಹರಿವಿನ ಪ್ರಮಾಣ ನೋಡಿಕೊಂಡು ನೀರಾವರಿ ಇಲಾಖೆ ಸಿಬ್ಬಂದಿ ನೀರು ಬಿಡುಗಡೆ ಮಾಡುತ್ತಿದ್ದಾರೆ. ಅದೇರೀತಿ ಹುಕ್ಕೇರಿ, ಗೋಕಾಕ, ಮೂಡಲಗಿ ಸೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ರಾಜಾಲಖಮಗೌಡ ಜಲಾಶಯದಿಂದ ನೀರು ಬಿಡುಗಡೆ
