ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 8 ರಿಂದ 11 ಮಕ್ಕಳು ಅಸ್ವಸ್ಥಗೊಂಡಿದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಅಪರಿಚಿತ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಕೀಟನಾಶಕ ಬೆರೆಸಿರುವುದು ದೃಢವಾಗಿದೆ. ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯ ಅವಧಿ ಒಳಗೆ ಟ್ಯಾಂಕಿನಲ್ಲಿ ಕೀಟನಾಶಕ ಬೆರಸಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಟ್ಯಾಂಕನಲ್ಲಿ ಹೆಚ್ಚಿನ ಪ್ರಮಾದಲ್ಲಿ ನೀರು ಇದ್ದುದರಿಂದ ವಿಷದ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಲಾಗಿದೆ.
ನೀರು ಕುಡಿದ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಆರೋಗ್ಯ ಇಲಾಖೆ ಸಿಬ್ಬಂದಿಗಳು ಶಾಲೆಗೆ ಆಗಮಿಸಿ ಸೂಕ್ತ ಮುನ್ನಚ್ಚರಿಕೆ ಕ್ರಮ ವಹಿಸಿದ್ದಾರೆ.
ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳ ಪಡಿಸಲಾಗಿದೆ.