ಬೆಳಗಾವಿ, :ಹಲವು ತಿಂಗಳುಗಳ ಕಾಲ ನಿರಂತರವಾಗಿ ದುಂಬಾಲು ಬಿದ್ದ ಪರಿಣಾಮ ಬೆಳಗಾವಿಯಿಂದ ಬೆಂಗಳೂರಿಗೆ ಬಹುಕಾಲದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಬಲ್ಲ ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ ಸಂಚಾರಕ್ಕೆ ಚಾಲನೆ ನೀಡುವ ನಿರೀಕ್ಷೆ ದಟ್ಟವಾಗಿದೆ. ಅದೇ ದಿನ ಬೆಂಗಳೂರಿನ ಹಳದಿ ಮಾರ್ಗದ ಮೆಟ್ರೊ ರೈಲು ಸಂಚಾರಕ್ಕೂ ಚಾಲನೆ ನೀಡಲಿದ್ದಾರೆ. ಅನ್ನು ಉದ್ಘಾಟಿಸುವ ನಿರೀಕ್ಷೆಯಿದೆ – ಅದೇ ದಿನ ಅವರು ನಗರದ ಹಳದಿ ಮಾರ್ಗದ ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ.
ಆಗಸ್ಟ್ 10ರಂದು ಬೆಳಗ್ಗೆ ಬೆಳಗಾವಿಯಿಂದ ಪ್ರಥಮ ಪ್ರಯಾಣ ಪ್ರಾರಂಭಿಸುವ ವಂದೇ ಭಾರತ ರೈಲು ಮಧ್ಯಾಹ್ನ ಬೆಂಗಳೂರನ್ನು ತಲುಪಲಿದೆ. ಅದೇ ಸಂಜೆ ಮರಳಿ ಬೆಳಗಾವಿಗೆ ಹಿಂದುರಗಲಿದೆ. ಈ ಕುರಿತು ಪ್ರಧಾನ ಮಂತ್ರಿ ಕಚೇರಿಯಿಂದ (ಪಿಎಂಒ) ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
ಬೆಳಗಾವಿಯಿಂದ ಬೆಂಗಳೂರನ್ನು ಸಂಪರ್ಕಿಸಲು ಶೀಘ್ರಗತಿಯ ವಂದೇ ಭಾರತ ಸೇವೆಯ ನೀಡುವಂತೆ ಕಳೆದ 15 ತಿಂಗಳುಗಳಿಂದ ನಿರಂತರವಾಗಿ ಬೇಡಿಕೆ ಸಲ್ಲಿಸುತ್ತಾ ಬರಲಾಗಿತ್ತು. ಈ ವಿಷಯದ ಕುರಿತು ಪ್ರಥಮವಾಗಿ ಸಂಸದ ಜಗದೀಶ್ ಶೆಟ್ಟರ ಅವರು ಧ್ವನಿ ಎತ್ತಿ, ಜೂನ್ 2024 ರಲ್ಲಿ ಪ್ರಧಾನಿ ಅವರಿಗೆ ಪತ್ರ ಬರೆದು, ನಿರಂತರವಾಗಿ ಒತ್ತಡ ಹಾಕುತ್ತಾ ಬಂದಿದ್ದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರೂ ಕೂಡ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಹಲವಾರು ವೈಯಕ್ತಿಕವಾಗಿ ಮನವಿ ಮಾಡುತ್ತಲೆ ಇದ್ದರು. ಇತ್ತೀಚೆಗೆ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು, ಈಗಾಗಲೇ ಬೆಳಗಾವಿ ಬೆಂಗಳೂರು ರೇಲ್ವೆಗೆ ಅನುಮತಿ ನೀಡಲಾಗಿದ್ದು, ನೂತನ ಬೋಗಿಗಳ ಬಂದ ತಕ್ಷಣ ಸಂಚಾರ ಆರಂಭಿಸಲಾಗುವದು ಎಂದು ಹೇಳಿದ್ದರು.
ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ. ಹಾಗೂ ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ.
ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಂಸದರಾದ ಜಗದೀಶ ಶೆಟ್ಟರ ಹಾಗೂ ಈರಣ್ಣ ಕಡಾಡಿ ಅವರು ಧನ್ಯವಾದ ಅರ್ಪಿಸಿದ್ದಾರೆ.