ಬೆಳಗಾವಿ,: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಮ್ಮ ಮನೆಯಲ್ಲಿ ಗಣೇಶ ಮೂರ್ತಿಯನ್ನು ಈ ವರ್ಷವೂ ಪ್ರತಿಷ್ಠಾಪಿಸಿದರು. ಇದಕ್ಕೂ ಮುನ್ನ ಬೆಳಗಾವಿ ಚೆನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಗಣಪನನ್ನು ಹಿಡಿದುಕೊಂಡು ಮನೆಯವರೆಗೆ ಸಾಗಿ ಪ್ರತಿಷ್ಟಾಪನೆ ನೆರವೇರಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಸಾಮರಸ್ಯಕ್ಕೆ ಎಲ್ಲೆಡೆಯೂ ‌ಪ್ರಶಂಸೆ ವ್ಯಕ್ತವಾಗುತ್ತಿದೆ.
ಸದಾ ಭಾವೈಕ್ಯತೆ, ವಿವಿಧತೆಯಲ್ಲಿ ಏಕತೆಯ ಹಾಗೂ ಮಾನವೀಯತೆಯ ಬಗ್ಗೆ ಸಂದೇಶ ಸಾರುವ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗಣೇಶ ಚತುರ್ಥಿಯಂದು ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಮನುಕುಲ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.
ಬುಧವಾರ ನಗರದೆಲ್ಲೆಡೆ ಭಕ್ತಾದಿಗಳು ಗಣೇಶನನ್ನು ಪ್ರತಿಷ್ಠಾಪನೆ ಮಾಡುವ ಸಡಗರದಲ್ಲಿದ್ದು, ಜಿಲ್ಲಾಧಿಕಾರಿಗಳು ತಮ್ಮ ಪರಿವಾರದೊಂದಿಗೆ ಚೆನ್ನಮ್ಮ ವೃತ್ತದಲ್ಲಿ ಇರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಪರಿಸರಪ್ರೇಮಿ ಗಣೇಶನನ್ನು ಪ್ರತಿಷ್ಠಾಪಿಸಲು ಅಣಿಯಾಗಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿಗಳ ಕುಟುಂಬದವರೊಂದಿಗೆ, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು