ಚಿತ್ರದುರ್ಗ: ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿಯ ಜವರಗೊಂಡನ ಹಳ್ಳಿಯಲ್ಲಿ ಗುರುವಾರನಸುಕಿನ 2 ಗಂಟೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಹೊತ್ತಿ ಉರಿದ ಪರಿಣಾಮ ಕನಿಷ್ಠ 12 ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದೆ. 25 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಭೀಕರ ದುರಂತ ಸಂಭವಿಸಿದೆ.
ಎದುರಿನಿಂದ ಬರುತ್ತಿದ್ದ ಲಾರಿ ಡಿವೈಡರ್ ಹಾರಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಡಿಸೇಲ್ ಟ್ಯಾಂಕ್ ಸ್ಫೋಟ ಗೊಂಡು ಬೆಂಕಿ ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಗಾಯಾಳು ಗಳನ್ನು ಹಿರಿಯೂರು ಸೇರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಬಸ್ ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರು ಅಪಘಾತವಾದ ಬಳಿಕ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತ ನಡೆದ ಬಳಿಕ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್​​ ಆಗಿದ್ದು, ಶಿರಾವರೆಗೂ ಕಿಲೋ ಮೀಟರ್​ಗಟ್ಟಲೇ ಸಾವಿರಾರು ವಾಹನಗಳು ನಿಂತಿರುವ ದೃಶ್ಯ ಕಂಡು ಬಂದಿತು.
ದುರಂತಕ್ಕೀಡಾದ ಬಸ್​​​ ಬೆಂಗಳೂರಿಂದ ಗೋಕರ್ಣಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು, ಅಂದಾಜು 18 ಮಂದಿ ಸಜೀವ ದಹನವಾಗಿದ್ದಾರೆ.
ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವ ಕಾರ್ಯ ಆಗಬೇಕಿದೆ. ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ, ಜಿಲ್ಲಾಡಳಿತದ ಅಧಿಕಾರಿಗಳಿ ಭೇಟಿ ನೀಡಿ ಬಸ್, ಲಾರಿ ತೆರವು, ಮೃತದೇಹ ಆಸ್ಪತ್ರೆಗೆ ಸಾಗಿಸುವುದು, ಬದುಕುಳಿದವರಿಗೆ ಚಿಕಿತ್ಸೆ ಹೀಗೆ ವಿವಿಧ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
ಬಸ್​​ನಲ್ಲಿ 29 ಮಂದಿ ಸಂಧ್ಯಾ, ಮಂಜುನಾಥ್​, ದಿಲೀಪ್, ಶಶಾಂಕ್​, ಬಿ.ಬಿಂಧು, ಪ್ರೀತೀಶ್ವರನ್​, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್​, ಮಾನಸ, ಮಿಲನಾ, ಹೇಮರಾಜ್​ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್​, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್​, ಹೆಚ್​.ಕಿರಣ್ ಪಾಲ್​, ಎಂ.ಕೀರ್ತನ್​​, ಜಿ.ನಂದಿತಾ, ಹೆಚ್​.ದೇವಿಕಾ, ಮೇಘರಾಜ್​, ಎಸ್​.ಎನ್​.ಮಸ್ರತ್​ಉನ್ನೀಸಾ, ಸಯಿದ್ ಜಮೀರ್​​ ಗೌಸ್​, ಎಸ್​ಗಗನಶ್ರೀ, ರಶ್ಮಿ ಮಹಲೆ, ಆರ್​.ರಕ್ಷಿತಾ ಪ್ರಯಾಣ ಮಾಡುತ್ತಿದ್ದವರು ಎಂಬ ಪ್ರಾಥಮಿಕ‌ ಮಾಹಿತಿ ದೊರೆತಿದೆ.