ಬೆಳಗಾವಿ,: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ 2026 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದು, 7 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ್ ಪಾಟೀಲ್ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಪ್ರಾರ್ಥನಾ ಅವರು ನಿರಂತರ ಅಧ್ಯಯನದಿಂದ ಈ ಫಲಿತಾಂಶವನ್ನು ಸಾಧಿಸಿದ್ದು, ಅವರ ಯಶಸ್ವಿಗೆ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಕೀರ್ತಿ ತೆಗೆದುಕೊಂಡು ಬಂದಿದ್ದಾರೆ ಎಂದು ಡಿಡಿಪಿಐ ಸೀತಾರಾಮ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರಕಾರ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿ, ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಶೇ. 94.5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಸುಮಾರು ಏಳು ಲಕ್ಷ 20809 ವಿದ್ಯಾರ್ಥಿಗಳು
ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿವೆ. ವಿಶೇಷವಾಗಿ ಈ ಮೂರು ಜಿಲ್ಲೆಗಳು ಕರಾವಳಿ ಪ್ರದೇಶ. ಕಲಬುರ್ಗಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ
ಚಿಕ್ಕೋಡಿ, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ಉತ್ತರ, ಉಡುಪಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ್ ಪಾಟೀಲ್ ಅವರು ಪೂರ್ಣ ಅಂಕ ಪಡೆದು ಸರ್ಕಾರಿ ಶಾಲೆಗಳ ಕೀರ್ತಿ ಹೆಚ್ಚಿಸಿದ್ದಾರೆ.
SSLC ಪರೀಕ್ಷೆ 2026 625ಕ್ಕೆ 625 ಅಂಕ ಪಡೆದವರು ದಾವಣಗೇರೆಯ ಭರತ ಜಿ, ಚಿಕ್ಕಮಗಳೂರಿನ ಬೃಂದಾ ಎಂ ತಪ್ಸೆ, ಬೆಂಗಳೂರು(ಉ) ಧನುಷ್ಯ ಸುಧೀರ, ಉಡುಪಿಯ ಪ್ರೀತಮ ಜಿ ಪೂಜಾರ, ವಿಜಯಪೂರದ ಸೌಜನ್ಯ ಬಸವರಾಜ ಕಂದಕೂರ, ರಾಯಚೂರಿನ ಸುಖದೇವ.
