ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಅನಾವರಣಗೊಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸರಕಾರದ ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಶಾಸಕರಾದ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಪೂಜಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಬೀದರ್ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.
ಕೊಕಟನೂರ ಗ್ರಾಮ ಸೇರಿದಂತೆ ಅಥಣಿ ಮತಕ್ಷೇತ್ರದ ಸಾವಿರಾರು ಜನರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.