ಬೆಳಗಾವಿ: ಮನೆಯ ಮುಂದೆ ಹಿಲ್ಲು ತೆಗೆಯುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ- ಮಗ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಪ್ರಭಾಕರ ಹುಂಬಿ (62) ಹಾಗೂ ಅವರ ಮಗ ಮಂಜುನಾಥ ಹುಂಬಿ (35) ಮೃತಪಟ್ಟ ದುರ್ದೈವಿಗಳು. ಪ್ರಭಾಕರ ಅವರು ಮನೆಯ ಮುಂದಿನ ಹುಲ್ಲು ತೆಗೆಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಿದ್ದಿದ್ದಾರೆ ಆಗ ಮಗ ಮಂಜುನಾಥ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ ಆತನಿಗೂ ವಿದ್ಯುತ್ ತಗುಲಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಸಂಜೀವ್ ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ,
ಹೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ ಎದ್ದು ಕಾಣುತ್ತವೆ. ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊಣೆ ಮಾಡಿ ದೂರು ದಾಖಲಿಸಿಕೊಳ್ಳುವಂತೆ ಸ್ಥಳದಲ್ಲಿದ್ದ ಸಿಪಿಐಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ಶಾಸಕರೊಂದಿಗೆ ಮಾತನಾಡಿದ್ದು, ಸಂತ್ರಸ್ತ ಕುಟುಂಬಕ್ಕೆ ಸರಕಾರದ ಸಹಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವದೆಂದು ಭರವಸೆ ನೀಡಿದರು.
ಹೆಸ್ಕಾಂನ ಒಂದು ತಂಡ ಗ್ರಾಮಕ್ಕೆ ಬರಲಿದ್ದು, ಜೋತು ಬಿದ್ದ ವೈಯರ್ ಸರಿಪಡಿಸಲಿದ್ದಾರೆ. ಗ್ರಾಮದಲ್ಲಿನ ವಿದ್ಯುತ್ ವೈಯರ್ ಗಳನ್ನು ದುರಸ್ತಿ ಮಾಡಲಿದ್ದು, ಗ್ರಾಮಸ್ಥರು ಅವರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.