ಬೆಳಗಾವಿ, :ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸುಮಾರು 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಬೆಳಗಾವಿಯ ಬೈಲೂರಿನ ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮಿಜಿ ಅವರಿಗೆ ರಾಜ್ಯಾತ್ಸವ ಪ್ರಶಸ್ತಿ ಒಲಿದು ಬಂದಿದೆ.

ಶ್ರೀ ನಿಜಗುಣಾನಂದ ಸ್ವಾಮಿಜಿ ಅವರಿಗೆ ಸಮಾಜ ಸೇವೆಗೆ ಹಾಗೂ ಸಂಗೀತ / ನೃತ್ಯಕ್ಕೆ ಡಾ. ಬಾಳೇಶ ಭಜಂತ್ರಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಿಂದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಬೆಂಗಳೂರಿಗೆ 11 ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ 5 ಪ್ರಶಸ್ತಿಗಳನ್ನು ಕೊಡಮಾಡಲಾಗಿದೆ.