ಬೆಳಗಾವಿ,: ಸತ್ತ ವಿಷಯಕ್ಕೆ ಜೀವ ತುಂಬಲು ಸದಾ ಹವಣಿಸುವ ಎಂ ಇ ಎಸ್ ಕರ್ನಾಟಕ ರಾಜ್ಯೋತ್ಸವ ದಿನವಾದ ನವೆಂಬರ 1 ರಂದು ಬೆಳಗಾವಿಯಲ್ಲಿ ಪುಂಡಾಟ ಮಾಡಿ, ಅನುಮತಿ ಇಲ್ಲದಿದ್ದರೂ ಕರಾಳ ದಿನ ಆಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ದ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್, ಸರಿತಾ ಪಾಟೀಲ್, ಸಾರಿಕಾ ಪಾಟೀಲ್, ಅಂಕುಶ ಕೇಸರಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಪ್ರಕರಣದ ದೂರು ದಾಖಲಾಗಿದೆ. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿದ್ದರು. ಈ ಆಧಾರದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ನ.1ರಂದು ಕಪ್ಪು ಬಟ್ಟೆ ಧರಸಿ, ನಾಡದ್ರೋಹಿ ಘೋಷಣೆ ಕೂಗಿತ್ತ, ನೂರಾರು ಜನ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಉದ್ಯಾನದಿಂದ ಮೆರವಣಿಗೆ ಮಾಡಿದ್ದರು. ಕರಾಳ ದಿನಾಚರಣೆಗೆ ಅನುಮತಿ ಇಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೇಳಿದ್ದರು. ಆದರೂ ಸಹ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮಾಡಿ ಕರಾಳ ದಿನಾಚರಣೆ ಮಾಡಿದ್ದರು. ಇದಕ್ಕೆ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.ಎಂಇಎಸ್ ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿತ್ತು. ನಿಷೇಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಕರಾಳ ದಿನ ಆಚರಿಸಲಾಗಿತ್ತು ಅಲ್ಲದೇ ಪೊಲೀಸರ ಮುಂದೆಯೇ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡಾಟ ಮೆರೆದಿದ್ದರು. ಬೆಳಗಾವಿ, ಕಾರವಾರ, ನಿಪ್ಪಾಣಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು ಎಂದು ಘೋಷಣೆ ಕೂಗಿದ್ದರು.
